ಮಂಡ್ಯ : ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಾಮೂಹಿಕವಾಗಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನ ಎಲ್ಲರಿಗೂ ಒಂದೇ ರೀತಿಯ ಅವಕಾಶ ಕೊಟ್ಟಿದೆ. ಯಾರು ಬೇಕಾದರೂ ರಾಷ್ಟ್ರಪತಿ, ಪ್ರಧಾನಿ ಹಾಗೂ ಇನ್ನಿತರೆ ಗೌರವದ ಹುದ್ದೆಗಳನ್ನು ಪಡೆಯಬಹದು. ಸಂವಿಧಾನ ಕೊಟ್ಟ ಮತದಾನ ಅವಕಾಶದಿಂದಲೇ ನಾವಿಂದು ಚುನಾಯಿತ ಪ್ರತಿನಿಧಿಗಳಾಗಿ ಜನಸೇವೆ ಮಾಡುತ್ತಿದ್ದೇವೆ ಎಂದರು.