ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ.
ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಸಂಗೀತ ಕಾರಂಜಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ಚಾಲನೆ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದ ಕೆಆರ್‌ಎಸ್‌ನ ಸಂಗೀತ ಕಾರಂಜಿ ತನ್ನ ನರ್ತನವನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತ ಸಂಗೀತ ಕಾರಂಜಿಯನ್ನು ಹೊಸದಾಗಿಯೇ ನಿರ್ಮಿಸಿದೆ. ಮುಂಬೈ ಮೂಲದ ಗ್ರೀನ್ ಕೇರ್ ಕಂಪನಿಯು ಈ ವರ್ಷದ ಮಾರ್ಚ್‌ನಲ್ಲಿ ನೂತನ ಸಂಗೀತ ಕಾರಂಜಿ ನಿರ್ಮಾಣದ ಪಡೆದು ವಾರಗಳ ಹಿಂದೆಯೇ ನವೀಕರಣ ಕಾಮಗಾರಿ ಮುಗಿಸಿತ್ತು. ಆದರೆ ಉದ್ಘಾಟನೆ ಕಾರ‍್ಯಕ್ರಮ ಹಮ್ಮಿಕೊಳ್ಳಬೇಕೆಂಬ ದೃಷ್ಟಿಯಿಂದ ಹೊಸ ಸಂಗೀತ ಕಾರಂಜಿಯನ್ನು ಪ್ರವಾಸಿಗರಿಗೆ ತೆರೆದಿರಲಿಲ್ಲ.
ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಕಾರಂಜಿಯ ಉದ್ಘಾಟನೆ ನೆರವೇರಿಸಿದ್ದಾರೆ. ಈ ಮೂಲಕ ದಸರಾ ಸಂದರ್ಭದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರ ಮನಸ್ಸಿಗೆ ಮುದ ನೀಡಲು ಅನುವು ಮಾಡಿಕೊಟ್ಟಿದ್ದಾರೆ. ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉದ್ಯಾನದ ವಿವಿಧ ಕಾರಂಜಿಗಳಲ್ಲಿ ಸಂಗೀತ ಕಾರಂಜಿ ಪ್ರಮುಖ ಆಕರ್ಷಣೆಯಾಗಿದೆ.
ಯುವರತ್ನ ಚಿತ್ರದ ‘ಫೀಲ್ ದಿ ಪವರ್’
ದೇಶದ ಮೊದಲ ಹೈಟೆಕ್ ಸಂಗೀತ ಕಾರಂಜಿ ಇದಾಗಿದ್ದು ಅತ್ಯಾಧುನಿಕ ಟು-ಡೈಮನ್‌ಷನ್ (೨ಡಿ) ನಾಜಿಲ್ ಅನ್ನು ಅಳವಡಿಸಲಾಗಿದೆ. ನೂತನ ಕಾರಂಜಿಯಲ್ಲಿ ಹೊಸ ವಿನ್ಯಾಸ, ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಾಗಿದೆ. ಜತೆಗೆ ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಹಾಡುಗಳನ್ನು ಅಳವಡಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ‘ಯುವರತ್ನ’ ಚಿತ್ರದ ‘ಫೀಲ್ ದಿ ಪವರ್’, ವಿಷ್ಣುವರ್ಧನ್ ಅವರ ‘ಜೀವನದಿ’ ಚಿತ್ರದ ‘ಕನ್ನಡ ನಾಡಿನ ಜೀವನದಿ ಕಾವೇರಿ’ಹಾಗೂ ದೇಶ ಭಕ್ತಿಗೀತೆ ‘ಸಾರೆ ಜಹಾಸೆ ಅಚ್ಚ..’ ಮುಂತಾದ ಹಾಡುಗಳು ಜನಮನ ಗೆಲ್ಲಲಿದೆ.
ಪ್ರತೀ ದಿನ ಸಂಜೆ ೭ ರಿಂದ ೮ಗಂಟೆವರೆಗೆ ಕಾರಂಜಿ ಕಾರ್ಯಕ್ರಮ ನಡೆಯಲಿದ್ದು, ವಾರಾಂತ್ಯದಲ್ಲಿ ೯ ಗಂಟೆ ವರೆಗೆ ನಡೆಯಲಿದೆ ಎಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಎಇಇ -ರುಕ್ ಅಹಮದ್ ಅಬು ತಿಳಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…