ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಹೇಳಿದರು.
ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಡ್ಯ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತಿ (ಮಾದರ ಚೆನ್ನಯ್ಯ ಮಾದರ ಧೂಳಯ್ಯ ಡೋಹರ ಕಕ್ಕಯ್ಯ ಸಮಗಾರ ಹರಳಯ್ಯ ಉರಿಲಿಂಗ ಪೆದ್ದಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಳನ್ನು ಮಾಡಿದ್ದಾರೆ. ಶರಣರು ಅನ್ನ ದಾಸೋಹ ಮತ್ತು ಕಾಯಕ ದಾಸೋಹವನ್ನು ಆರಾಧಿಸುತ್ತಿದ್ದರು. ಯುವ ಸಮುದಾಯವು ಶರಣರ ಆದರ್ಶಗಳನ್ನುಬೆಳಸಿಕೊಳ್ಳಬೇಕು ಮತ್ತು ಸಮುದಾಯಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಆಯೋಗದ ಮಾಜಿ ಸದಸ್ಯರಾದ ವೆಂಕಟೇಶ್ ದೊಡ್ಡೇರಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್ ಅನುಪಮ, ಮುಖಂಡರುಗಳಾದ ಎಲ್ .ಸಂದೇಶ್, ಕೃಷ್ಣ, ತಮ್ಮಣ್ಣ, ಸಿ.ಕೆ ಪಾಪಯ್ಯ ಎನ್ .ಆರ್ ಚಂದ್ರಶೇಖರ್, ಕೆಂಪಣ್ಣ ಹಾಗೂ ಇನ್ನಿತರರು ಭಾಗವಹಿಸಿದ್ದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…