ಮಂಡ್ಯ: ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನ್ನು ಅರಿಯಬೇಕು ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ತಿಳಿಸಿದರು.
ಮಂಡ್ಯ ಪಿ ಇ ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಸೋಮವಾರ ನಡೆದ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲೈಂಗಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕುರಿತ ಕಾರ್ಯಾಗಾರದ ಮಹತ್ವ ತಿಳಿದು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕೆಲವು ಮಹಿಳೆಯರು ತಾವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಅವರ ಮೇಲಾಗುವ ದೌರ್ಜನ್ಯದ ವಿರುದ್ದ ಹೊರಡಲು ಹಿಂದೆ ಉಳಿಯುತ್ತಾರೆ. ಜೊತೆಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇರುತ್ತದೆ. ಇಂದು ಆಯೋಜಿಸಲಾಗಿರುವ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರದ ಮಹತ್ವವನ್ನು ಎಲ್ಲರೂ ತಿಳಿದು ತಮ್ಮ ಮೇಲಾಗುವ ಕಿರುಕುಳದಿಂದ ರಕ್ಷಣೆ ಪಡೆಯುವ ಕಾಯ್ದೆಗಳನ್ನು ತಿಳಿದುಕೊಳ್ಳಿ ಎಂದರು.
ಮಹಿಳೆಯರಿಗೆ ಮೂಲಭೂತ ಸೌಲಭ್ಯದ ಜೊತೆಗೆ ಗೌರವ ನೀಡಿ: ಡಾ ಕುಮಾರ
ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯವನ್ನು ಕೊಡುವುದರ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ನಮ್ಮ ತಾಯಿ, ಸಹೋದರಿಯಂತೆ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.
ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ತಡೆಗಟ್ಟುವ ಸಲುವಾಗಿ ಕಾನೂನಿನ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ರೂಪಿಸಲಾಗಿದೆ. ಕಾಯ್ದೆಗಿಂತ ಮುಖ್ಯವಾದದ್ದು ನಮ್ಮಲ್ಲಿರುವ ಸಂಸ್ಕಾರವಾಗಿದ್ದು, ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ಕಾಣಬೇಕು. ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದು, ತಾಯಿಯಂತೆ ಕಾಣುತ್ತೇವೆ ಎಂದರು.
ಒಬ್ಬ ಮಹಿಳೆಯು ಮಗಳಾಗಿ, ಅಕ್ಕಳಾಗಿ, ಹೆಂಡತಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ನಾವು ಪಡೆಯಬೇಕಾದರೆ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿಯನ್ನು ಸಾಧಿಸಬೇಕು ಎಂದರು.
ನಮ್ಮ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲು ಅವಕಾಶ ಮಾಡಿಕೊಟ್ಟಂತಹ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ಮೇಡಂ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಎಂ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಿಷಿ ಮದನ್, ಡಾ ಕ್ರಿಷಿನಾ ಕಾಂತಾರಾಜು, ಡಾ ಸ್ವಪ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…