ಮಂಡ್ಯ

ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಿದೆ ಕಾನೂನು

ಮಂಡ್ಯ: ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನ್ನು ಅರಿಯಬೇಕು ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ತಿಳಿಸಿದರು.

ಮಂಡ್ಯ ಪಿ ಇ ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಸೋಮವಾರ ನಡೆದ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೈಂಗಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕುರಿತ ಕಾರ್ಯಾಗಾರದ ಮಹತ್ವ ತಿಳಿದು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕೆಲವು ಮಹಿಳೆಯರು ತಾವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಅವರ ಮೇಲಾಗುವ ದೌರ್ಜನ್ಯದ ವಿರುದ್ದ ಹೊರಡಲು ಹಿಂದೆ ಉಳಿಯುತ್ತಾರೆ. ಜೊತೆಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇರುತ್ತದೆ. ಇಂದು ಆಯೋಜಿಸಲಾಗಿರುವ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರದ ಮಹತ್ವವನ್ನು ಎಲ್ಲರೂ ತಿಳಿದು ತಮ್ಮ ಮೇಲಾಗುವ ಕಿರುಕುಳದಿಂದ ರಕ್ಷಣೆ ಪಡೆಯುವ ಕಾಯ್ದೆಗಳನ್ನು ತಿಳಿದುಕೊಳ್ಳಿ ಎಂದರು.

ಮಹಿಳೆಯರಿಗೆ ಮೂಲಭೂತ ಸೌಲಭ್ಯದ ಜೊತೆಗೆ ಗೌರವ ನೀಡಿ: ಡಾ ಕುಮಾರ

ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯವನ್ನು ಕೊಡುವುದರ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ನಮ್ಮ ತಾಯಿ, ಸಹೋದರಿಯಂತೆ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ತಡೆಗಟ್ಟುವ ಸಲುವಾಗಿ ಕಾನೂನಿನ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ರೂಪಿಸಲಾಗಿದೆ. ಕಾಯ್ದೆಗಿಂತ ಮುಖ್ಯವಾದದ್ದು ನಮ್ಮಲ್ಲಿರುವ ಸಂಸ್ಕಾರವಾಗಿದ್ದು, ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ಕಾಣಬೇಕು. ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದು, ತಾಯಿಯಂತೆ ಕಾಣುತ್ತೇವೆ ಎಂದರು.

ಒಬ್ಬ ಮಹಿಳೆಯು ಮಗಳಾಗಿ, ಅಕ್ಕಳಾಗಿ, ಹೆಂಡತಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ನಾವು ಪಡೆಯಬೇಕಾದರೆ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿಯನ್ನು ಸಾಧಿಸಬೇಕು ಎಂದರು.

ನಮ್ಮ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲು ಅವಕಾಶ ಮಾಡಿಕೊಟ್ಟಂತಹ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ಮೇಡಂ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಎಂ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಿಷಿ ಮದನ್, ಡಾ ಕ್ರಿಷಿನಾ ಕಾಂತಾರಾಜು, ಡಾ ಸ್ವಪ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

10 mins ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

5 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

5 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

9 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

10 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

14 hours ago