ಮಂಡ್ಯ

ಸಂವಿಧಾನ ಉಳಿಸುವ ಜವಾಬ್ದಾರಿ ಯುವಕರದ್ದು: ನ್ಯಾ.ನಾಗಮೋಹನ್‌ ದಾಸ್‌

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ. ಸಮಸಮಾಜ ನಿರ್ಮಾಣ ಕುರಿತು ರಚನೆಯಾದ ಸಂವಿಧಾನ  ಅನೇಕರಿಗೆ  ಅದರ ಮೂಲ ತತ್ವಗಳ ಬಗ್ಗೆ ತಿಳಿದೇ ಇಲ್ಲ ಎಂಬುದು ವಿಷಾದನೀಯ ಎಂದರು.

ಸಂವಿಧಾನದ ಬಗ್ಗೆ ಎಲ್ಲರೂ ತಿಳಿಯಬೇಕು ಎಂಬ ಉದ್ದೇಶದಿಂದ 2018 ರಲ್ಲಿ  ‘ಸಂವಿಧಾನ ಓದು’ ಎಂಬ ಪುಸ್ತಕ ರಚಿಸಿದ್ದೆ. ಕಳೆದ 6 ವರ್ಷದಲ್ಲಿ ಸಂವಿಧಾನ ಕುರಿತು 2000 ಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದೇನೆ. ಇಷ್ಟಾದರೂ ರಾಜ್ಯದ ಒಂದಿಷ್ಟು ಜನರನ್ನು ತಲುಪಲು ನಾವು ವಿಫಲರಾಗಿದ್ದೇವೆ ಎಂದು ಬೇಸರಿಸಿದರು.

ಜಿಲ್ಲೆಯ ಯುವ ಜನರಿಗೆ ಸಂವಿಧಾನದ ಮಹತ್ವ ಮೂಲ ತತ್ವಗಳನ್ನು ತಿಳಿಸುವುದೇ ಈ ಶಿಬಿರದಲ್ಲಿ ಮೂಲ ಉದ್ದೇಶ. ಜೊತೆಗೆ ನಾವು ಅಭಿವೃದ್ಧಿಯತ್ತ ಸಾಗಲು ಇರುವ ಒಂದೇ ದಾರಿ ಎಂದರೆ ಅದು ನಮ್ಮ ಸಂವಿಧಾನ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ಮಾತನಾಡಿ, ನಾನು ಯು.ಪಿ.ಎಸ್.ಸಿ. ಪರೀಕ್ಷೆ ಬರೆಯುವ ಸಮಯದಲ್ಲಿ ಮೊಟ್ಟ ಮೊದಲು ನಾನು ಓದಿದ್ದು ಸಂವಿಧಾನದ ಪುಸ್ತಕ. ಮೊದಲು ಓದುವಾಗ ಕಾನೂನಿನ ಭಾಷೆ ಅರ್ಥ ಮಾಡಿಕೊಳ್ಳಲು ಕಷ್ಟವಾಯಿತು, ಆದರೆ ಅದನ್ನು ಅರ್ಥ ಮಾಡಿಕೊಂಡಾಗ ಸಮಾಜದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಂಗತಿಯನ್ನು ಅರಿತುಕೊಂಡೆ ಎಂದರು.

ನಮಗೆ ಕಷ್ಟ ಬಂದಾಗ ಯಾರೂ ನಮ್ಮ ಜೊತೆ ನಿಲ್ಲುವುದಿಲ್ಲ, ನಮ್ಮ ಬದುಕಿನ ಹೋರಾಟವನ್ನು ನಾವೇ ಮಾಡಬೇಕು ಅದು ಜೀವನದ ತತ್ವ, ನಮ್ಮನ್ನು ಹೊರತು ಪಡಿಸಿ ನಮ್ಮನ್ನು ಕಾಪಾಡುವ ಶಕ್ತಿ ಯಾರಿಗಾದರೂ ಇದೆ ಎಂದರೆ ಅದು ಕೇವಲ ಭಾರತೀಯ ಸಂವಿಧಾನಕ್ಕೆ ಮಾತ್ರ ಎಂದು ಹೇಳಿದರು.

ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾಧು, ನಗರಸಭೆ ಮಾಜಿ ಅಧ್ಯಕ್ಷ ಸಿದ್ಧರಾಜು, ಮಹಿಳಾ ರೈತ ಮುಖಂಡರಾದ ಸುನಂದ ಜೈರಾಮ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಕೃಷ್ಣ.ಆರ್, ಕಾರ್ಮಿಕ ಮುಖಂಡರಾದ ಸಿ.ಕುಮಾರಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago