ನಾಗಮಂಗಲ : ಸಾರ್ವಜನಿಕ ಹಾಗೂ ರೈತ ಸಮುದಾಯದ ಒಳಿತಿಗೆ ಹಾಗೂ ಆರ್ಥಿಕ ಅಭಿವೃದ್ಧಿಯ ಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರ ಸಂಘಗಳ ಪಾತ್ರ ಅನನ್ಯ ಎಂದು ಸಚಿವರಾದ ಚೆಲುವರಾಯಸ್ವಾಮಿ ತಿಳಿಸಿದರು.
ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ಟಿ.ಬಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ 50 ಲಕ್ಷ ರೂ. ವೆಚ್ಚದ ಗೋಧಾಮು ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಸಹಕಾರ ಸಂಘವು ತಾಲೂಕಿನಲ್ಲಿ ತನ್ನ ಆರ್ಥಿಕ ಅಭಿವೃದ್ಧಿ ಬೆಳವಣಿಗೆಗೆ ವಿವಿಧ ಸಂಪನ್ಮೂಲಗಳನ್ನು ಕ್ರೋಡಿಕರಿಸಿ ಅಭಿವೃದ್ದಿಯತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ನೂತನ ಯೋಜನೆಗಳಿಗೆ ತಾವುಗಳು ಸಹಕಾರ ನೀಡುವುದಾಗಿ ಭರವಸೆ ಕೊಟ್ಟರು.
ಇದೇ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರುಗಳು ನೌಕರರು ಹಾಗೂ ಮುಖಂಡರು ಉಪಸ್ಥಿತರಿದ್ದರು.





