ಮಂಡ್ಯ

ವಿದೇಶಗಳಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರ: ಅಮರನಾಥ ಗೌಡ

ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ ಮೂಲಕ ವಿದೇಶದಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರಾಗಿದೆ ಎಂದು ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರನಾಥ ಗೌಡ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಆಯೋಜಿಸಿದ್ದ “ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ” ವಿಷಯದ ಬಗ್ಗೆ ನಡೆದ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದೇಶದಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ.‌ ಆದರೂ ಕನ್ನಡತನವನ್ನು ಗಟ್ಟಿಗೊಳಿಸುವ ಕನ್ನಡದ ಲಿಪಿ ಉಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಆಶಯ ನುಡಿಗಳನ್ನಾಡಿದ ಬಹರೇನ್ ನ ಕಿರಣ್ ಉಪಾಧ್ಯಾಯ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಂತೆ ವರ್ಷಕ್ಕೊಮ್ಮೆ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಮುಖಾಂತರ ವಿದೇಶದಲ್ಲಿ ಕನ್ನಡದ ಕಂಪು ಹರಡಬೇಕು ಎಂದರು.

ವಿದೇಶದಲ್ಲಿರುವ ಕನ್ನಡಿಗರನ್ನು ಅನ್ಯರಂತೆ ಭಾವಿಸಬೇಡಿ. ಜಗತ್ತಿನ 175 ದೇಶಗಳಲ್ಲಿ ಕನ್ನಡ ಸಂಘಟನೆಗಳು ಬಹಳ ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ವಿಶೇಷವೆಂದರೆ ಬಹರೇನ್ ನಲ್ಲಿ ಸ್ವಂತ ಕನ್ನಡ ಭವನದ ಕಟ್ಟಡವಿದೆ. ಅದರಲ್ಲಿ ಸಭಾಂಗಣ, ವಾಚನಾಲಯ, ಸಭಾಭವನ ಒಳಗೊಂಡಿದ್ದು ಅಲ್ಲಿ ಕನ್ನಡದ ತರಗತಿಗಳು ಕೂಡ ನಡೆಯುತ್ತವೆ ಎಂದು ಹೇಳಿದರು.

ವಿದೇಶದಲ್ಲಿರುವ ಕನ್ನಡಿಗರ ಸಮಸ್ಯೆಗಳು, ಪರಿಹಾರಗಳು ವಿಷಯದ ಬಗ್ಗೆ ಮಾತನಾಡಿದ ಕತಾರ್ ನ ಎಚ್. ಕೆ. ಮಧು, ಶ್ರಮಿಕ ವರ್ಗ ಹಾಗೂ ಅವರ ಕುಟುಂಬ ವರ್ಗದ ಸ್ಥಿತಿಗತಿಗಳ ಬಗ್ಗೆ ವಿವರಿಸಿದರು. ಶ್ರಮಿಕ ವರ್ಗದವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಗತ್ತಿನ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ನೋಡುವ ಕ್ರಮ ವಿಷಯದ ಬಗ್ಗೆ ಮಾತನಾಡಿದ ಇಂಗ್ಲೆಂಡ್ ನ ಅಶ್ವಿನ್ ಶೇಷಾದ್ರಿ, ಫ್ರೆಂಚ್, ಜರ್ಮನಿ, ಚೀನಾದವರು ಎಂದಿಗೂ ಮಾತೃಭಾಷೆಯನ್ನು ಬಿಟ್ಟುಕೊಡುವುದಿಲ್ಲ. ಅವರು ಅವರ ಭಾಷೆ ಬಿಟ್ಟು ಅನ್ಯ ಭಾಷೆ ಮಾತನಾಡುವುದಿಲ್ಲ. ಹೀಗಾಗಿ ಅನ್ಯಭಾಷಿಕರು ಅವರ ಭಾಷೆ ಕಲಿಯುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ನಾವು ಕೂಡ ನಮ್ಮ ಭಾಷೆ ಬಗ್ಗೆ ಅಭಿಮಾನ ಹೊಂದಿರಬೇಕು ಎಂದರು.

ಹೊರನಾಡಿನಲ್ಲಿ ಕನ್ನಡದ ಅಸ್ತಿತ್ವ, ಸವಾಲುಗಳು ವಿಷಯದ ಬಗ್ಗೆ ಮಹಾರಾಷ್ಟ್ರದ ಕಮಲಾಕರ ಕಡವೆ ಮಾತನಾಡಿ, ಬ್ಯಾಂಕಿಂಗ್, ಐಟಿ, ಹೋಟೆಲ್, ಶಿಕ್ಷಣ ಕ್ಷೇತ್ರಗಳಲ್ಲಿ ಬಹುತೇಕ ಕನ್ನಡಿಗರೇ ಕಾಣುತ್ತಾರೆ. ಹೊರರಾಜ್ಯ, ಹೊರದೇಶದ ಸಂಸ್ಕೃತಿ, ಭಾಷೆ ಜೊತೆಗೆ ವಿಲೀನಗೊಂಡು ಹೊಂದಿಕೊಳ್ಳುವ ಶಕ್ತಿ ಕನ್ನಡಿಗರಿಗಿದೆ ಎಂದು ಹೇಳಿದರು.

ವಿದೇಶದಲ್ಲಿರುವ ಕನ್ನಡ ಶಾಲೆಗಳ ಸ್ಥಿತಿಗತಿಗಳು ವಿಷಯದ ಬಗ್ಗೆ ಮಾತನಾಡಿದ ಯುಎಇನ ಶಶಿಧರ ನಾಗರಾಜಪ್ಪ ಅವರು, ಅಮೆರಿಕ, ಅರಬ್, ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ ನಾನಾ ರಾಷ್ಟ್ರಗಳಲ್ಲಿ 5866 ವಿದ್ಯಾರ್ಥಿಗಳಿಗೆ 704 ಶಿಕ್ಷಕರು ಕನ್ನಡ ಕಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು. ಜರ್ಮನಿಯ ರಶ್ಮಿ ನಾಗರಾಜ್ ಅವರು ಮಾತನಾಡಿ, ಜರ್ಮನಿಯಲ್ಲೂ ನಲಿ ಕಲಿ ಮಾದರಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ಕ. ಸಾ. ಪ ಅಂತರಾಷ್ಟ್ರೀಯ ಸಮನ್ವಯಾಧಿಕಾರಿ ನಿವೇದಿತ ಹಾವನೂರ – ಹೊನ್ನತ್ತಿ ಅವರು ವಿಶೇಷ ಉಪಸ್ಥಿತಿ ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

22 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

45 mins ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

50 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

57 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

1 hour ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

1 hour ago