ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು ಲಾಭದತ್ತ ಕೊಂಡೊಯ್ಯುವ ಎಲ್ಲಾ ಪ್ರಯತ್ನ ನಡೆಸಿದ್ದೇವೆ. ಲಾಭದತ್ತಾ ನೆಡೆಯುತ್ತಿರುವ ಹಾಗೂ ರೈತರ ಜೀವನಾಡಿಯಾಗಿರುವ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಾಸ್ತಾಪವೇ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ರೈತರು ಮತ್ತು ಕಬ್ಬು ಬೆಳೆಗಾರರು ಈ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಕಿಲ್ಲ ಎಂದು ಹೇಳಿದ್ದಾರೆ.





