Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಬಿತ್ತನೆ ಬೀಜ ,ರಸಗೊಬ್ಬರಕ್ಕೆ ಕೊರತೆ ಇಲ್ಲ: ಚಲುವರಾಯಸ್ವಾಮಿ

ಮಂಡ್ಯ: ಪೂರ್ವ ಮುಂಗಾರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ರಾಜ್ಯದಲ್ಲಿ ಬಿತ್ತನೆ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ವಿರೊಧ ಪಕ್ಷಗಳ ನಾಯಕರು ಕೇವಲ ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡಿ ರೈತರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕಳೆದ ಸಾಲಿನಲ್ಲಿ ಕೇಂದ್ರದಿಂದ ಬರ ಪರಿಹಾರ ಕೊಡಿಸಲು ಕನಿಷ್ಠ ಪ್ರಯತ್ನ ಪಟ್ಟಿದ್ದರೂ ಕೃಷಿಕರು ಮೆಚ್ಚುತ್ತಿದ್ದರು ಎಂದು ಟಾಂಗ್‌ ನೀಡಿದರು.

ಬರ ಪರಿಸ್ಥಿತಿಯಲ್ಲೂ ರಾಜ್ಯ ರೈತರ ಹಿತಕಾಯಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ರೈತರ ಹಿತ ಕಾಯಲು ನಾವು ಸದಾ ಬದ್ದ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Tags: