ಮಂಡ್ಯ

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ವೖದ್ಯಕೀಯ ಸೇವೆಯಲ್ಲಿ ತೊಂದರೆ ಆಗಬಾರದು ಎಂದು ಹೇಳಿದರು.

ಗರ್ಭಿಣಿಯರು, ಶಿಶುಗಳು, ವೃದ್ಧರು ಹಾಗೂ ಗಂಭೀರ ರೋಗಿಗಳಿಗೆ ಆದ್ಯತೆ ನೀಡಿ ಚಿಕಿತ್ಸೆ ನೀಡಬೇಕು ಮತ್ತು ಡಯಾಲಿಸಿಸ್, ಪ್ರಸೂತಿ, ಐಸಿಯು ಹಾಗೂ ಜೀವ ರಕ್ಷಕ ಸೇವೆಗಳು ನಿರಂತರವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

108 ಆಂಬುಲೆನ್ಸ್ ಸೇವೆ ಹಾಗೂ ರೆಫರಲ್ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು ಮತ್ತು ತಾಲ್ಲೂಕು ಮಟ್ಟದಲ್ಲಿ ಕರ್ತವ್ಯ ವೈದ್ಯರನ್ನು ನಿಯೋಜಿಸಿ ಹಾಜರಾತಿ ಕಡ್ಡಾಯಗೊಳಿಸಬೇಕು ಎಂದು ಹೇಳಿದರು.

ಅಗತ್ಯವಿದ್ದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಿ ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಸಂದರ್ಭಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.ಔಷಧಿ ಮತ್ತು ಉಪಕರಣಗಳ ಲಭ್ಯತೆ ಕುರಿತು ದೈನಂದಿನ ಪರಿಶೀಲನೆ ನಡೆಸಬೇಕು ಮತ್ತು ಆಸ್ಪತ್ರೆಗಳಲ್ಲಿ ಸಹಾಯ ಕೌಂಟರ್ ವ್ಯವಸ್ಥೆ ಸಕ್ರಿಯಗೊಳಿಸಬೇಕು ಎಂದು ತಿಳಿಸಿದರು.

ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು.ಸಂಘಟನೆಗಳ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಸಂಧಾನ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಲು ಸಂಘಟನೆಗಳು ಸಹಕರಿಸಬೇಕು ಎಂದು ಹೇಳಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ರೀತಿಯ ಮುಷ್ಕರಕ್ಕೆ ಮುಂದಾಗದೆ. ಆರೋಗ್ಯ ಸೇವೆಯನ್ನು ನಿರಂತರವಾಗಿ ನೀಡುವಂತೆ ಸಂಘಟನೆಗಳ ಪ್ರತಿನಿಧಿಗಳಿಗೆ ತಿಳಿಸಿ. “ಜನಾರೋಗ್ಯ ಸೇವೆ ಅತ್ಯಂತ ಪ್ರಾಮುಖ್ಯತೆಯದ್ದು ರೋಗಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಕರ್ತವ್ಯ ನಿರ್ವಹಿಸುವುದು ಜವಾಬ್ದಾರಿಯಾಗಿದೆ” ಎಂದು ಸೂಚಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

28 mins ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

4 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

5 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

5 hours ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

5 hours ago