Thieves broke the lock of a ration shop and stole 95 bags of rice
ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ ಮೂಟೆಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ.
ಬೀಗವನ್ನು ಅಲ್ಲೇ ಬಿಸಾಡಿ, ಉದ್ದದ ಲಾಂಗ್ ತರಹದ ಮಚ್ಚನ್ನು ಅಲ್ಲೇ ಬಿಸಾಡಿ, ಬೀಡಿ ಸಿಗರೇಟ್‌ಗಳನ್ನು ಸೇದಿ, ಮಧ್ಯಪಾನ ಮಾಡಿ ಎಲ್ಲವನ್ನು ಅಲ್ಲೇ ಬಿಸಾಡಿ ಪರಾರಿಯಾಗಿದ್ದಾರೆ. ರಾತ್ರಿ ಸುಮಾರು ಒಂದು ಗಂಟೆಯಿಂದ 3 ಗಂಟೆಯ ಒಳಗೆ ಈ ಕಳ್ಳತನ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಸಂಬಂಧ ವ್ಯವಸ್ಥಾಪಕ ನಟರಾಜು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…