ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪ್ರಸಿದ್ಧಿಯಾಗಿರುವ ಶ್ರೀ ಕಾಳಮ್ಮ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ತೊಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ದೋಚಲಾಗಿದೆ.
ಬುಧವಾರ ಬೆಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು, ಪರಿಶೀಲಿಸಿದಾಗ ಹುಂಡಿ ದೋಚಿರುವುದು ಬೆಳಕಿಗೆ ಬಂದಿದೆ.
ದೇವಾಲಯದ ಉಸ್ತುವಾರಿ ಮುಖಂಡರ ಅಂದಾಜಿನಂತೆ ೧.೫೦ ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿತ್ತು. ಅದನ್ನೆಲ್ಲ ಕಳ್ಳರು ದೋಚಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…