ಮಂಡ್ಯ: ಸ್ಯಾಂಡಲ್‌ವುಡ್ ಸ್ಟಾರ್ ದರ್ಶನ್ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ ಈವರೆಗೆ ಸುಮಲತಾ ಎಲ್ಲಿಯೂ ಯಾವುದೇ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದು, ಪ್ರಚಾರದಲ್ಲಿ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ್ದಾರೆ.
ಸುಮಲತಾ ಹಾಗೂ ಎಚ್ಡಿಕೆ ಅವರು ಕಳೆದ ಚುನಾವಣೆ ವೇಳೆ ವಾಗ್ದಾಳಿಗಳು, ಮನಸ್ಥಾಪಗಳು ಕಂಡು ಬಂದಿತ್ತು. ಈ ಬಾರಿ ಚುನಾವಣೆಯಲ್ಲಿ ಸುಮಲತಾ ಬಿಜೆಪಿಯಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಸುಮಲತಾ ಮನವೋಲಿಸಿದ ಬಿಜೆಪಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿತ್ತು. ಇನ್ನು ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ ನೀಡುತ್ತಾರಾ ಎಂದು ಪ್ರಶ್ನೆಗಳು ಉದ್ಭವಿಸಿದ್ದವು.
ಸುಮಲತಾ ಸದ್ಯ ಯಾವುದೇ ಪ್ರಚಾರಕ್ಕೂ ಹೋಗದೇ ಸುಮ್ಮನಿರುವುದು ಎಲ್ಲರಲ್ಲಿಯೂ ಅಚ್ಚರಿ ಮೂಡಿಸಿತ್ತು. ಇನ್ನು ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಡ ದರ್ಶನ್, ತನ್ನ ತಾಯಿ ಬಾವಿಗೆ ದುಮುಕು ಎಂದರು ಬೀಳುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸುಮಲತಾ ಗೆ ಯು ಟರ್ನ್ ಹೊಡೆದಿರುವ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಮುಂದಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ತಾವು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿರುವುದು ರಾಜಕೀಯ ಪಕ್ಷದ ಪರವಾಗಿ ಅಲ್ಲ, ಅಭ್ಯರ್ಥಿಯ ಪರವಾಗಿ ಎಂದಿರುವ ನಟ ದರ್ಶನ್, ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಅಗುತ್ತೆ. ಹೀಗಾಗಿ ನಾನೇ ಸ್ಪಷ್ಟನೆ ಕೊಡುತ್ತಿದ್ದೇನೆ. ಸುಮಲತಾಗೆ ಟಿಕೆಟ್ ಸಿಗದಿದ್ದರೇ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಬೇಕು ಎಂದು ಉದಯ್ ಗೌಡ್ರು ಕೇಳಿದ್ದರು. ಮೊದಲು ಅವರು ಕರೆದಿದ್ದರು ಎನ್ನುವ ಕಾರಣಕ್ಕಾಗಿ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಮತ ನೀಡುವ ಮೂಲಕ ಉದಯ್-ನರೇಂದ್ರ ಕೈಗಳನ್ನು ಬಲಪಡಿಸಿ ಎಂದು ಡಿ ಬಾಸ್ ಮತಯಾಚನೆ ಮಾಡಿದರು.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…