ಮಂಡ್ಯ

ʻಡೆಡ್‌ ಹಾರ್ಸ್‌ʼ ಎಂದವರಿಗೆ ಮನ್‌ಮುಲ್‌ ಚುನಾವಣೆಯಲ್ಲಿ ಉತ್ತರ ಸಿಕ್ಕಿದೆ ; ಸಿ.ಡಿ ಗಂಗಾಧರ್‌

ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೆಚ್ಚಿನ ಮಟ್ಟದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನಮ್ಮ ನಾಯಕರ ವಿರುದ್ಧ ಡೆಡ್ ಹಾರ್ಸ್, ಜಸ್ಟ್ ಪಾಸ್ ನಂತಹ ಹೇಳಿಕೆಗಳನ್ನು ನೀಡಿ ಟೀಕಿಸಿದ್ದು, ಅವರಿಗೆ ಸಹಕಾರ ಬಂಧುಗಳು ಮನ್‌ಮುಲ್ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಲೋಕಸಭಾ ಚುನಾವಣೆಯ ನಂತರದ ನಡೆದ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್‌ಗೆ ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಎನ್.ಚಲುವರಾಯಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ವಿಜಿಕುಮಾರ್, ನಾಗರಾಜ್, ಉದಯ್, ಕಾಂಗ್ರೆಸ್ ನಗರ ಅಧ್ಯಕ್ಷ ರುದ್ರಪ್ಪ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

2 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

2 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

2 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

9 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

10 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

10 hours ago