ಮಂಡ್ಯ

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ (18) ಮೃತಪಟ್ಟವರು.

ಘಟನೆ ವಿವರ :
ಗ್ರಾಮದ ಪಕ್ಕದ ಮನೆಯ ನಿವಾಸಿ 35 ವರ್ಷದ ವಿವಾಹಿತ ಮುತ್ತುರಾಜು ಎಂಬ ವ್ಯಕ್ತಿ ಮಗಳು ಪ್ರಿಯಾ ಅವರನ್ನು ಪರಿಚಯ ಮಾಡಿಕೊಂಡು ನಿನ್ನನ್ನು ಮದುವೆ ಮಾಡಿಕೊಳ್ಳುತ್ತನೆಂದು ಪುಸಲಾಯಿಸಿದ್ದಾನೆ. ಇದಕ್ಕೆ ಒಪ್ಪದ ತಾಯಿ ಶಕುಂತಲಾ ಮತ್ತು ತಂದೆ ಮಹೇಶ್ ನಿನಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಮತ್ತು ಮಕ್ಕಳಿದ್ದಾರೆ ಮತ್ತೆ ಮದುವೆ ಸಾಧ್ಯವಿಲ್ಲ ಎಂದು ಮುತ್ತುರಾಜನಿಗೆ ಬುದ್ದಿ ಹೇಳಿದ್ದಾರೆ.

ಬಳಿಕ ಮಗಳಾದ ಪ್ರಿಯಾಳಿಗೆ ಬೇರೆಯ ವರನಿಗೆ ಮದುವೆ ಮಾಡೋಣ ಎಂದು ಸಿದ್ದತೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿದ ಮುತ್ತುರಾಜು ಶಕುಂತಲಾ ಅವರಿಗೆ ಕರೆ ಮಾಡಿ, ಪ್ರಿಯಾಳನ್ನು ಬೇರೆ ಕಡೆಗೆ ಮದುವೆ ಮಾಡಿದರೇ ನಿಮ್ಮನ್ನು ಕೊಲೆ ಮಾಡುವೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ತಾಯಿ ಶಕುಂತಲಾ ಮತ್ತು ಮಗಳು ಪ್ರಿಯಾ ಇಬ್ಬರು ಭಾನುವಾರ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಕುಂತಲ ಗಂಡ ಎಂ.ಮಹೇಶ್ ದೂರಿನಲ್ಲಿ ತಿಳಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago