ಮಂಡ್ಯ

ಚಿನ್ನದ ಸರ ಅಪಹರಿಸಿದ್ದ ಮೂವರ ಬಂಧನ

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಶ್ರೀನಗರದ ನಿವಾಸಿ ಎಸ್.ಕುಮಾರ ಅಲಿಯಾಸ್ ಕಸ್ಟಡಿ (೨೬), ರಾಮನಗರ ಜಿಲ್ಲೆಯ ಎಸ್.ಎಂ. ಹಳ್ಳಿಯ ನಾಗರಾಜ ಅಲಿಯಾಸ್ ಸತ್ತಾರ್ (೨೭), ರಾಮನಗರ ಟೌನ್‌ನ ನರಸಿಂಹ (೨೫) ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ.

ನಾಗಮಂಗಲ ತಾಲೂಕು ಕೋಣನೂರು ಗ್ರಾಮದ ಸುಶೀಲಮ್ಮ ಅವರು ಆ. ೮ರಂದು ಮಧ್ಯಾಹ್ನ ೧೨.೧೫ರಲ್ಲಿ ತಮ್ಮ ಮೈದುನ ದೇವೇಗೌಡರೊಂದಿಗೆ ಚೀಣ್ಯ-ಗಂಗವಾಡಿ ರಸ್ತೆಯಲ್ಲಿ ಹೋಗಿದ್ದಾಗ ಆರೋಪಿಗಳು ಕಾರಿನಲ್ಲಿ ಬಂದು ಮೊಪೆಡ್‌ನ್ನು ಅಡ್ಡ ಹಾಕಿ ಸುಶೀಲಮ್ಮಳ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಡಿವೈಎಸ್ಪಿ ಚಲುವರಾಜು, ಸಿಪಿಐ ನಿರಂಜನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಾಗಡಿ ಜಲಸೂರು ರಸ್ತೆಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ವೇಳೆ ಸರಗಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಲ್ಲದೆ, ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ಚಿನ್ನಾಭರಣ ಸೇರಿದಂತೆ ೧೫.೭೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರ ಕಾರ‍್ಯವನ್ನು ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

5 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

6 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

10 hours ago