Mysore
25
few clouds

Social Media

ಗುರುವಾರ, 05 ಡಿಸೆಂಬರ್ 2024
Light
Dark

ಉಪಚುನಾವಣೆ ಫಲಿತಾಂಶ ನಮ್ಮ ಪರವಾಗಿಲ್ಲ: ಸಂಸದ ಯದುವೀರ್‌ ಒಡೆಯರ್‌ ಬೇಸರ

ಮಂಡ್ಯ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಸೋಲು ಅನುಭವಿಸಿರುವ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಅವರು, ಈ ಉಪಚುನಾವಣೆ ಫಲಿತಾಂಶ ನಮ್ಮ ಪರವಾಗಿಲ್ಲ. ರಾಜ್ಯ ಸರ್ಕಾರದ ಪರ ಬೈಎಲೆಕ್ಷನ್‌ ಫಲಿತಾಂಶ ಬರುವುದು ಸಹಜ. ಸೋಲು ಆಗುತ್ತೆ, ಆದರೆ ನಾವೆಲ್ಲಾ ಜನರ ತೀರ್ಪನ್ನು ಸ್ವಾಗತಿಸಬೇಕು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು.  ಆಗ ಮಾತ್ರ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗುತ್ತದೆ ಎಂದರು.

 

 

Tags: