Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಶ್ರೀರಂಗಪಟ್ಟಣ| ಕೋಳಿ ಜೂಜಾಟ: ಮೂವರ ಬಂಧನ

shreeranga pattana

ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿ, ಸ್ಥಳದಲ್ಲಿದ್ದ 12 ಬೈಕ್‌ಗಳು, ಒಂದು ಆಟೋ, ಒಂದು ಕಾರು ಹಾಗೂ ಜೂಜಿಗೆ ಪಣಕ್ಕಿಟ್ಟಿದ್ದ 7600 ನಗದನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Tags:
error: Content is protected !!