ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್ ಬ್ಯಾಂಕ್ ಸಮೀಪ ನಡೆದಿದೆ.
ಸೋನು, ಸಿಮ್ರಾನ್ ಹಾಗೂ ಸಿದ್ದೇಶ್ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಮೈಸೂರಿನ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ.
ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದ ಇವರು, ಕಾಲುವೆಗೆ ಇಳಿದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರಗೆ ತೆಗೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





