Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

ಹೊಸ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು : ಯದುವೀರ್

ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ.

ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಈತನೇ ಸರ್ಕಾರ ರಚನೆಯಾಗಿದೆ. ಅವರ ಯೋಜನೆಗಳ ಅನುಷ್ಠಾನಕ್ಕೆ ಒಂದಷ್ಟು ಸಮಯ ನೀಡಬೇಕು. ಅದಾದ ಮೇಲೆ ಸರ್ಕಾರದ ಬಗ್ಗೆ ಅಭಿಪ್ರಾಯ ಹೇಳಬಹುದು ಎಂದು ಹೇಳಿದ್ದಾರೆ.

ನಾನು ರಾಜಕೀಯಕ್ಕೆ ಬರಬಹುದು ಅಂತ ಮಾತು ಹಲವು ದಿನಗಳಿಂದ ಕೇಳಿಬರುತ್ತಿದೆ. ಆದರೆ ನಾನು ಬೇಕಾದಷ್ಟು ಸಾರಿ ಹೇಳಿದ್ದೇನೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಅಂತ. ಅರಮನೆ ಸಂಪ್ರದಾಯ ಪಾಲನೆ ಮತ್ತು ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಅಷ್ಟೇ ಎಂದು ಯದುವೀರ್ ಅವರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ