ಮದ್ದೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ.
ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಚಾಲಕನ ಅಜಾಗರೂಕತೆ ಚಾಲನೆಯೇ ಘಟನೆ ನಡೆಯಲು ಕಾರಣ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಮದ್ದೂರು ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





