ಮಂಡ್ಯ

ಟಿಪ್ಪರ್‌ ಲಾರಿ ಡಿಕ್ಕಿ: ರೈತ ಮಹಿಳೆ ಸಾವು

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ.

ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಚಾಲಕನ ಅಜಾಗರೂಕತೆ ಚಾಲನೆಯೇ ಘಟನೆ ನಡೆಯಲು ಕಾರಣ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್‌ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಮದ್ದೂರು ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

5 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

40 mins ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

1 hour ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

2 hours ago