ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದರು. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯವಿಲ್ಲ. ಕೆಆರ್‌ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪುಣ್ಯಸ್ಮರಣೆಯ ದಿನದಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದ್ದರು. ಶೋಷಿತರ ಮಹಿಳೆಯರಿಗೆ ನೆರವು ನೀಡಿದವರು ಟಿಪ್ಪು. ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದಿದ್ದೇ ಟಿಪ್ಪು ಸುಲ್ತಾನ್. ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಅವರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲೇ ಎಂದು ಹೇಳಿದರು.



