Mysore
20
overcast clouds

Social Media

ಭಾನುವಾರ, 25 ಜನವರಿ 2026
Light
Dark

ಮಂಡ್ಯದಲ್ಲಿಂದು ಭತ್ತದ ನಾಟಿ ಮಾಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ.

ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಭತ್ತ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೊತ್ತತ್ತಿ ಗ್ರಾಮದ ಹೊರವಲಯದಲ್ಲಿನ ರೈತರಾದ ಸುಖೇಂದ್ರ ಮತ್ತು ಶಿವಬಸಪ್ಪ ಅವರ ಜಮೀನಿನಲ್ಲಿ ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಿದ್ದು, ಇಂದು ಮಧ್ಯಾಹ್ನದ ವೇಳೆಗೆ ವಿಜಯೇಂದ್ರ ಅವರು ಭತ್ತ ನಾಟಿ ಮಾಡಲಿದ್ದಾರೆ.

ಎಷ್ಟೋ ಮಂದಿ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಅವರನ್ನು ಮತೆ ಕೃಷಿಯಡೆಗೆ ಮರಳಿ ಕರೆ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ ವಿಜಯೇಂದ್ರ ಅವರು ರಾಜ್ಯದ್ಯಂತ ಪ್ರವಾಸ ಕೈಗೊಂಡಿದ್ದು, ಅದಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಚಾಲನೆ ನೀಡುತ್ತಿದ್ದಾರೆ.

Tags:
error: Content is protected !!