Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಇಂದಿನಿಂದಲೇ ಗೃಹಲಕ್ಷ್ಮೀ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ

ಮಂಡ್ಯ: ಇಂದಿನಿಂದಲೇ ಗೃಹಲಕ್ಷ್ಮೀಯರ ಖಾತೆಗೆ ಗೃಹಲಕ್ಷ್ಮೀ ಗಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ. ಈಗ ಎಲ್ಲವೂ ಸರಿಯಾಗಿದೆ. ಇಂದೇ ಜೂನ್‌ ಹಾಗೂ ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದು ಘೋಷಿಸಿದರು.

ಈ ಮೂಲಕ ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದೇ ಹಣ ಜಮೆಯಾಗಲಿದೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಇಂದೇ ಹಣ ಜಮಾವಣೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ ಬ್ಯಾಂಕ್‌ಗೆ ಅಲೆದು ಅಲೆದು ಸುಸ್ತಾಗಿದ್ದ ಮಹಿಳೆಯರಿಗೆ ಈಗ ರಿಲೀಫ್‌ ಸಿಕ್ಕಿದೆ.

 

Tags: