ಮಂಡ್ಯ: ಇಂದಿನಿಂದಲೇ ಗೃಹಲಕ್ಷ್ಮೀಯರ ಖಾತೆಗೆ ಗೃಹಲಕ್ಷ್ಮೀ ಗಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ. ಈಗ ಎಲ್ಲವೂ ಸರಿಯಾಗಿದೆ. ಇಂದೇ ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದು ಘೋಷಿಸಿದರು.
ಈ ಮೂಲಕ ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದೇ ಹಣ ಜಮೆಯಾಗಲಿದೆ.
ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇಂದೇ ಹಣ ಜಮಾವಣೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ ಬ್ಯಾಂಕ್‌ಗೆ ಅಲೆದು ಅಲೆದು ಸುಸ್ತಾಗಿದ್ದ ಮಹಿಳೆಯರಿಗೆ ಈಗ ರಿಲೀಫ್ ಸಿಕ್ಕಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…