ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ನಾಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾಳೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದಾರೆ.
ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಗದ್ದೆಯಲ್ಲಿ ನಾಟಿ ನಡೆಯಲಿದೆ.
ನಾಳೆ ಬೆಳಿಗ್ಗೆ 10.30ಕ್ಕೆ ಕಾವೇರಿ ಹಾಗೂ ಕಟ್ಟೇರಿ ಬಳಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕೃಷಿ ಕಾರ್ಮಿಕ ಮಹಿಳೆಯರೊಂದಿಗೆ ಭತ್ತ ನಾಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭತ್ತ ಮತ್ತು ಧಾನ್ಯಗಳ ರಾಶಿಗೆ ಪೂಜೆ ನೆರವೇರಿಸಲಿದ್ದಾರೆ. ಗದ್ದೆಯಲ್ಲಿ ಸಂಪೂರ್ಣ ನಾಟಿ ಕಾರ್ಯಕ್ರಮ ಮುಗಿಯುವವರೆಗೂ ಅಲ್ಲೇ ಇದ್ದು, ಕೃಷಿ ಕಾರ್ಮಿಕರೊಂದಿಗೆ ಊಟ ಸವಿಯಲಿದ್ದಾರೆ.
ನಾಳೆ ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಸುರೇಶ್ ಬಾಬು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಭತ್ತ ನಾಟಿ ಮಾಡುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮತ್ತೊಮ್ಮೆ ರೈತರ ಪರ ಎಂದು ಸಾಬೀತುಪಡಿಸಲಿದ್ದಾರೆ.





