ಮಂಡ್ಯ

ನಾಳೆ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ ವೇದಿಕೆ ಕಾಮಗಾರಿಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ದಸರಾ ಉದ್ಘಾಟನಾ ಸ್ಥಳವಾದ ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ಸುಣ್ಣ-ಬಣ್ಣ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿದರು.

ಈ ವೇಳೆ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕರಿಸಲು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸುವಂತೆ ಸೂಚಿಸಿದರು. ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ನಿರ್ಮಾಣವಾಗಬೇಕು. ವಾಹನಗಳ ನಿಲುಗಡೆಗೆ ಸರಿಯಾದ ಸ್ಥಳವನ್ನು ನಿಗದಿಪಡಿಸಬೇಕು, ಕಾರ್ಯಕ್ರಮದ ರೂಪುರೇಶೆಗಳನ್ನು ಸಿದ್ಧಪಡಿಸಲು ರಚಿಸಲಾಗುವ ವಿವಿಧ ಸಮಿತಿಗಳು ಯಾವುದೇ ಲೋಪ ಬಾರದಂತೆ ವಹಿಸಿರುವ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಡೆಸಲು ತಿಳಿಸಿದರು.

ಇದನ್ನೂ ಓದಿ:-ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಮನೋರಂಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಯಾವುದೇ ವ್ಯತಿರಿಕ್ತವಾಗದಂತೆ ಕ್ರಮವಹಿಸಬೇಕು. ವೇದಿಕೆ ಬಳಿ ವಿವಿಧ ಇಲಾಖೆಗಳಿಂದ ಮಳಿಗೆ ನಿರ್ಮಾಣ ಮಾಡಿ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮವಹಿಸಬೇಕು. ಬನ್ನಿಮಂಟಪ ಹಾಗೂ ವೇದಿಕೆ ನಿರ್ಮಾಣದಲ್ಲಿ ಶುಚಿತ್ವದಲ್ಲಿ ರಾಜಿಯಿಲ್ಲದಂತೆ ಕ್ರಮವಹಿಸಬೇಕು. ಶ್ರೀರಂಗಪಟ್ಟಣ ದಸರಾ ಆನೆಗಳನ್ನು ವ್ಯವಸ್ಥಿತವಾಗಿ ಸ್ವಾಗತಿಸುವ ಕುರಿತು ಸೂಚನೆಗಳನ್ನು ನೀಡಿದರು. ಹಾಗೂ ದಸರಾ ಆನೆಗಳು ಆಗಮಿಸಿದ ನಂತರ ಪೂಜಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಪಾಲ್ಗೊಂಡರು.

ಶ್ರೀರಂಗಪಟ್ಟಣ ದಸರಾ ಉತ್ಸವ-೨೦೨೫ ಅನ್ನು ಯಾವುದೇ ಲೋಪ ಬಾರದಂತೆ ನಿರ್ವಹಣೆ ಮಾಡಲು ತಿಳಿಸಿದರು.

ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿದ ಬಳಿಕ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂದೆ ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತಿತರ ಅಧಿಕಾರಿಗಳು ಆನೆಗಳನ್ನು ಸ್ವಾಗತಿಸಿ ಪೂಜೆ ಸಲ್ಲಿಸಿದರು. ನಾಳೆ ಅಧಿಕೃತವಾಗಿ ಶ್ರೀರಂಗಪಟ್ಟಣ ದಸರೆಗೆ ಚಾಲನೆ ಸಿಗಲಿದೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಽಕಾರಿ ಡಾ.ಕುಮಾರ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಶ್ರೀರಂಗಪಟ್ಟಣ ದಸರಾ ನಡೆಯುವ ಶ್ರೀರಂಗವೇದಿಕೆ ಹಾಗೂ ಕಿರಂಗೂರು ಬನ್ನಿಮಂಟಪದ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago