ಮಂಡ್ಯ : ಕೆ ಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ.
ಮಳೆಯನ್ನು ಕೂಡ ಲೆಕ್ಕಿಸದೆ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು,ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುವ ನೀರನ್ನ ನೋಡಿ ರೋಮಾಂಚನಗೊಳ್ಳುತ್ತಿದ್ದಾರೆ. ಅಲ್ಲದೆ ಭೋರ್ಗರೆಯುವ ನೀರನ್ನ ನೋಡಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ.
ಜಲಪಾತವು ಕೂಡ ನೀರಿನಿಂದ ಕಂಗೊಳಿಸಿ ಆಕರ್ಷಿಸುತ್ತಿರುವುದರಿಂದಲೇ ಹೆಚ್ಚಿನ ಜನರು ಜಲಪಾತಕ್ಕೆ ಭೇಟಿ ಕೊಡುತ್ತಿದ್ದಾರೆ. ವೀಕೆಂಡ್ ನಲ್ಲಿ ಅಂತೂ ಅಕ್ಕಪಕ್ಕದ ಜಿಲ್ಲೆಗಳಿಂದ ಅಲ್ಲದೆ ನಾನಾ ಭಾಗದಿಂದಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ.





