Mysore
26
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಅವರು ಕೃಷಿ ಕೆಲಸಕ್ಕಾಗಿ ಎತ್ತುಗಳನ್ನು ಅಣ್ಣಹಳ್ಳಿ ಗ್ರಾಮದಿಂದ ಕರೆತರುತ್ತಿದ್ದ ಸಂದರ್ಭದಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಳವಳ್ಳಿ ಕಡೆಯಿಂದ ಹಲಗೂರು ಕಡೆಗೆ ಹೋಗುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ನಂತರ ಬಸ್ ಚಾಲಕ ಬಸ್ ಸಮೇತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ರಸ್ತೆ ತಡೆದು ಪ್ರತಿಭಟನೆ
ಅಪಘಾತದ ಸುದ್ದಿ ತಿಳಿದ ಸಾರ್ವಜನಿಕರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Tags:
error: Content is protected !!