ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಅವರು ಕೃಷಿ ಕೆಲಸಕ್ಕಾಗಿ ಎತ್ತುಗಳನ್ನು ಅಣ್ಣಹಳ್ಳಿ ಗ್ರಾಮದಿಂದ ಕರೆತರುತ್ತಿದ್ದ ಸಂದರ್ಭದಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಳವಳ್ಳಿ ಕಡೆಯಿಂದ ಹಲಗೂರು ಕಡೆಗೆ ಹೋಗುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ನಂತರ ಬಸ್ ಚಾಲಕ ಬಸ್ ಸಮೇತ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ರಸ್ತೆ ತಡೆದು ಪ್ರತಿಭಟನೆ
ಅಪಘಾತದ ಸುದ್ದಿ ತಿಳಿದ ಸಾರ್ವಜನಿಕರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…