Mysore
23
broken clouds

Social Media

ಗುರುವಾರ, 16 ಏಪ್ರಿಲ 2026
Light
Dark

ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು, ತಾಯಿ ಅಸ್ವಸ್ಥ

ಮಂಡ್ಯ: ಐಸ್‌ ಕ್ರೀಂ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತರಾಗಿದ್ದಾರೆ. ತಾಯಿ ಪೂಜಾ ತೀವ್ರ ಅಸ್ವಸ್ಥಗೊಂಡಿದ್ದಾರೆ.

ನಿನ್ನೆ(ಏ.೧೭) ಸಂಜೆ ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದ ತಾಯಿ ಮತ್ತು ಮಕ್ಕಳು ಅಸ್ವಸ್ಥರಾಗಿ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತು ತಾಯಿ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಮಕ್ಕಳ ಮೃತ ದೇಹ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
.

Tags:
error: Content is protected !!