ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತರಾಗಿದ್ದಾರೆ. ತಾಯಿ ಪೂಜಾ ತೀವ್ರ ಅಸ್ವಸ್ಥಗೊಂಡಿದ್ದಾರೆ.
ನಿನ್ನೆ(ಏ.೧೭) ಸಂಜೆ ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದ ತಾಯಿ ಮತ್ತು ಮಕ್ಕಳು ಅಸ್ವಸ್ಥರಾಗಿ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತು ತಾಯಿ ತೀವ್ರ ಅಸ್ವಸ್ಥಗೊಂಡಿದ್ದಾರೆ.
ಮಕ್ಕಳ ಮೃತ ದೇಹ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…