ಮದ್ದೂರು : ಮದ್ದೂರು ಕೆರೆಯ ಕೊಲ್ಲಿ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ರಾಮ್ ರಹೀಂ ನಗರ ಬಡಾವಣೆಯ ನಿವಾಸಿ ಅಹಮ್ಮದ್ ಪಾಷಾ ಅವರ ಪುತ್ರ ಅಜ್ಮಾನ್ ಪಾಷಾ (16) ಹಾಗೂ ಈತನ ಸ್ನೇಹಿತ ರಾಮನಗರದ ಮಹಮ್ಮದ್ ಅಕ್ಮಲ್ ಅವರ ಪುತ್ರ ಮಹಮ್ಮದ್ ಅಲಿ (14) ಮೃತಪಟ್ಟ ಬಾಲಕರಾಗಿದ್ದಾರೆ.
ಅಜ್ಮಾನ್ ಪಾಷಾ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಎಲ್‌ಐಸಿ ಬಡಾವಣೆಯ ಹಿಂಭಾಗದ ಕೊಲ್ಲಿ ನಾಲೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಈಜಲು ಬಾರದೆ ಮೃತಪಟ್ಟಿದ್ದು, ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ ಬಳಿಕ ಶವಗಳನ್ನು ಮೇಲಕ್ಕೆ ತೆಗೆಯಲಾಗಿದೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕರ ಶವವನ್ನು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…