ಮಂಡ್ಯ

ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ ದೀಪಕ್(೨೧) ಎಂಬವರು ಸೋಮನಹಳ್ಳಿ ಎಸ್.ಸಿ.ಎಂ.ಎಂ. ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಕ್ರೀಡೆಗೆ ಬೈಕ್‌ನಲ್ಲಿ ತನ್ನ ಸಹೋದರಿಯನ್ನು ಬಿಟ್ಟು, ಮಂಡ್ಯ ಕಡೆಗೆ ಹಿಂದಿರುಗುತ್ತಿದ್ದಾಗ ಎಳೆನೀರು ಮಾರುಕಟ್ಟೆ ಬಳಿ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು:
ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸೇತುವೆಗೆ ಹಾಕಿದ್ದ ಸರಳು ಚುಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಬೆಟ್ಟದಾಸನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೆಸ್ತೂರು ಗ್ರಾಮದ ರಾಮು (೫೦) ಮೃತಪಟ್ಟವರು. ಬೆಟ್ಟದಾಸನದೊಡ್ಡಿ ರಸ್ತೆಯಲ್ಲಿ ಕಿರುಸೇತುವೆ ನಿರ್ಮಿಸುತ್ತಿದ್ದು, ಸ್ಕೂಟರ್‌ನಲ್ಲಿ ಬರುತ್ತಿದ್ದ ರಾಮು ಅವರು ಸ್ಕೂಟರ್ ಸಮೇತ ಸೇತುವೆ ಒಳಗೆ ಬಿದ್ದಿದ್ದು, ಸರಳು ದೇಹದೊಳಗೆ ನುಗ್ಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಆದರೆ, ಇದ್ಯಾವುದನ್ನು ಲೋಕೋಪಯೋಗಿ ಇಲಾಖೆ ಅಽಕಾರಿಗಳು ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

10 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

10 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

11 hours ago