Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೆ.ಆರ್.ಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿಯಲ್ಲಿ ನಡೆದಿದೆ.

ಪಂಚಾಯತ್‌ನಿಂದ ಪೂರೈಕೆ ಮಾಡಲಾದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, 4 ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜವರಮ್ಮ ಹಾಗೂ ಚಿಕ್ಕಮ್ಮ ಎಂಬುವವರೇ ಕಲುಷಿತ ನೀರು ಕುಡಿದು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಅಸ್ವಸ್ಥರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಪ್ರಕರಣ ಗಂಭೀರವಾಗಿದ್ದರೂ ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿದ್ದು, ಜಿಲ್ಲಾಡಳಿತ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ನಾಲ್ವರು ತೀವ್ರ ನಿಗಾ ಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಗಂಭೀರವಾಗಿದ್ದು, ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇಬ್ಬರು ವೃದ್ಧೆಯರ ಸಾವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಾಲ್ಲೂಕು ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Tags: