ಮಂಡ್ಯ: ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ.
ಕಾವ್ಯ ಹಾಗೂ ಕೀರ್ತನಾ ಎಂಬ ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ಇಬ್ಬರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಹೊರಗೆ ಆಟ ಆಡುವಾಗ ಬೀದಿನಾಯಿಗಳು ದಾಳಿ ನಡೆಸಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಬಾಲಕಿಯರ ಪೋಷಕರು ಆಗ್ರಹಿಸಿದ್ದಾರೆ.





