ಮಂಡ್ಯ: ಡಿವೈಡರ್ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.
ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದು ಡಿವೈಡರ್ ದಾಟಿ ಬಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿದೆ. ಮಸೂದ್, ಅಯಾನ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವರಿಗೆ ಬೆಂಗಳೂರು, ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:- ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ
ಅತಿವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಮದ್ದೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





