ಮಂಡ್ಯ

ಇಬ್ಬರು ಮನೆಗಳ್ಳರ ಬಂಧನ : 182ಗ್ರಾಂ ಚಿನ್ನಭಾರಣ ವಶ

ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, ಮದ್ದೂರು ತಾಲ್ಲೂಕು ಸೋಮನಹಳ್ಳಿ ಗ್ರಾಮದ ಎಸ್.ಕೆ. ಸುರೇಶ್ ಅಲಿಯಾಸ್ ಸೂರಿ ಬಂಧಿತ ಆರೋಪಿಗಳು.

ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖದೀಮರನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಎಸ್.ಇ. ಗಂಗಾಧರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಮಂಡ್ಯ ಉಪವಿಭಾಗ ಡಿವೈಎಸ್‌ಪಿ ಎಚ್.ಲಕ್ಷ್ಮೀನಾರಾಯಣ ಪ್ರಸಾದ್ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ನವೀನ್ ಸುಪೇಕರ್, ಪಿಎಸ್‌ಐ ಎಸ್.ಜಿ.ಶೇಷಾದ್ರಿ ಕುಮಾರ, ಅಪರಾಧ ವಿಭಾಗದ ಪಿಎಸ್‌ಐ ಬಿ.ಎಸ್. ವೆಂಕಟೇಶ್, ಸಿಬ್ಬಂದಿಗಳಾದ ಟಿ.ಲಿಂಗರಾಜು, ಉಮರ್ ಅಹಮದ್ ಫಾರೂಖಿ, ಅನಿಲ್ ಕುಮಾರ್, ಓಬೇದುಲ್ಲಾ ಖಾನ್, ದಕ್ಷಿಣ ಮೂರ್ತಿ, ಮಂಜುನಾಥ, ಪ್ರಭುಸ್ವಾಮಿ, ಕುಮಾರ್, ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಮಹೇಶ್, ಕೃಷ್ಣ, ಲೋಕೇಶ್ ಹಾಗೂ ರವಿಕಿರಣ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಸದರಿ ತಂಡವು ಕಳೆದ ಜು.7ರಂದು ಆರೋಪಿಗಳಾದ ಗೋಪಿಕೃಷ್ಣ, ಎಸ್.ಕೆ. ಸುರೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿ ಮನೆ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಒಟ್ಟು 3 ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಗಳಿಂದ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

32 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago