ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ಸಾವು

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ.

ಬೆಂಗಳೂರು ಮೂಲದ ವಿಶಾಲ್(‌19) ಹಾಗೂ ತಮಿಳುನಾಡು ಮೂಲದ ರೋಹಣ್(‌17) ಸಾವನ್ನಪ್ಪಿದ ಯುವಕರು. ಮೈಸೂರಿನ ಅಜ್ಜಿ ಮನೆಗೆ ಬಂದಿದ್ದ ಯುವಕರು ಕುಟುಂಬದೊಂದಿಗೆ ನಿಮಿಷಾಂಭ ದೇಗುಲಕ್ಕೆ ಬಂದಿದ್ದರು. ಈ ವೇಳೆ ದೇವಾಲಯದ ಮಗ್ಗಲಿನಲ್ಲಿರುವ ಕಾವೇರಿ ನದಿಯಲ್ಲಿ ಈಜಲು ಹೋಗಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.