ಮಂಡ್ಯ

ಮನ್`ಮುಲ್’ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್’ ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು.

ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು.

ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ಮನ್’ಮುಲ್ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು‌.

ಒಕ್ಕೂಟದ ರೈತರ ಕ್ಷೇಮಾಭಿವೃದ್ಧಿ ನಿಧಿಯಿಂದ ಉತ್ಪಾದಕರ ಮಕ್ಕಳಿಗೆ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆ ತೆರೆಯುವ ಅಲೋಚನೆ ಇದೆ ಎಂದರು.

ಇದನ್ನೂ ಓದಿ:- ಹೈಕಮಾಂಡ್‌ ಕರೆ: ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಇದೇ ವೇಳೆ ನೂತನ ಅಧ್ಯಕ್ಷರನ್ನು ಒಕ್ಕೂಟದ ನಿರ್ದೇಶಕರು, ಅಧಿಕಾರಿಗಳು, ಬಂಧು ಮಿತ್ರರು ಅಭಿನಂದಿಸಿದರು.

ಈ ವೇಳೆ ಒಕ್ಕೂಟದ ನಿರ್ದೇಶಕರಾದ ಬೋರೇಗೌಡ, ಹರೀಶ್, ಸಾದೊಳಲು ಸ್ವಾಮಿ, ಶಿವಕುಮಾರ್, ಒಕ್ಕೂಟದ ಎಂ.ಡಿ.ಡಾ. ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು‌.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

13 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

26 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

33 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

48 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

57 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago