ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ ಕಾರ್ಯಕರ್ತರು ಮಂಡ್ಯದಲ್ಲಿ ದೂರು ನೀಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಗೆ ಆರ್‌ಎಸ್‌ಎಸ್ ಕಾರ್ಯಕರ್ತರೇ ವೇಷ ಧರಿಸಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಿ ಎಂ.ಲಕ್ಷ್ಮಣ್ ಅವರು ದೂರು ನೀಡಿದ್ದರು. ಈ ಹೇಳಿಕೆಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಕೆರೆಗೋಡು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದಾರೆ.
ಈ ದೂರನ್ನು ಹನುಮ ಧ್ವಜ ಸಮಿತಿ ಸದಸ್ಯರು ಸಲ್ಲಿಕೆ ಮಾಡಿದ್ದು, ದೇಶಭಕ್ತ ಆರ್‌ಎಸ್‌ಎಸ್ ಸಂಘಟನೆ ಮೇಲೆ ಸುಳ್ಳು ಆರೋಪದ ಹೇಳಿಕೆ ನೀಡಿದ್ದಾರೆ. ಹೀಗಾಗಿ ಎಂ.ಲಕ್ಷ್ಮಣ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಎಂ.ಲಕ್ಷ್ಮಣ್ ಅವರ ಹೇಳಿಕೆ ಏನು?
ಉದಯಗಿರಿ ಪೊಲೀಸ್ ಠಾಣೆ ಮೇಲೆ ಆರ್‌ಎಸ್‌ಎಸ್ ಕಾರ್ಯಕರ್ತರು ವೇಷಧರಿಸಿ ಕಲ್ಲೆಸೆದಿದ್ದಾರೆ. ಈ ಪ್ರಕರಣದಲ್ಲಿ 50ಕ್ಕೂ ಅಧಿಕ ಆರ್‌ಎಸ್‌ಎಸ್ ಕಾರ್ಯಕರ್ತರು ಗುಂಪಿನೊಂದಿಗೆ ಸೇರಿ ದಾಂಧಲೆ ನಡೆಸಿದ್ದಾರೆ. ಅವರ ಹುನ್ನಾರದಿಂದಲೇ ಪೊಲೀಸ್ ಠಾಣೆಯ ಮೇಲೆ ಗಲಭೆಯಾಗಿದೆ ಎಂದು ಹೇಳಿಕೆ ನೀಡಿದ್ದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…