ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8ರ ಸಮಯದಲ್ಲಿ ನಡೆದಿದೆ.
ಹೊಸ ಬೂದನೂರು ಗ್ರಾಮದ ಕೋಣೆ ಕೆಂಪಯ್ಯ ಅವರ ಮಗ ಸತೀಶ್ (38) ಹಾಗೂ ಮೂಡೆ ಪುಟ್ಟಲಿಂಗಯ್ಯ ಅವರ ಮಗ ಪ್ರದೀಪ್ (36) ಮೃತ ವ್ಯಕ್ತಿಗಳು. ತಮ್ಮ ಜಮೀನಿಗೆ ಹೋಗಿದ್ದ ಈ ಇಬ್ಬರು ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಪ್ರತಿಭಟನೆ: ಬೆಂಗಳೂರು ಮೈಸೂರು ಹೆದ್ದಾರಿ ಆದಾಗನಿಂದಲೂ ಈ ಮಾರ್ಗವಾಗಿ ಅಪಘಾತಗಳು ಹೆಚ್ಚುತ್ತಿದ್ದು, ಇದನ್ನು ತಡೆಯಬೇಕು. ಮೃತರ ಕುಟುಂಬಕ್ಕೆ ದಿಲೀಪ್ ಬಿಲ್ಡ್ ಕಾನ್ ಸಂಸ್ಥೆಯವರು ಪರಿಹಾರ ನೀಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಇದರಿಂದಾಗಿ ಬೆಂಗಳೂರು ಮೈಸೂರು ಹೆದ್ದಾರಿಯ ಉದ್ದಕ್ಕೂ ವಾಹನಗಳು ನಿಂತ ಹಿನ್ನೆಲೆಯಲ್ಲಿ ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವಾಯಿತು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…