Mysore
30
clear sky

Social Media

ಗುರುವಾರ, 29 ಜನವರಿ 2026
Light
Dark

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.

ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್‌ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೇ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.

ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಮಂಡ್ಯದಲ್ಲಿ ಮೈಶುಗರ್‌ ಶಾಲೆಯೇ ನಂಬರ್.‌1 ಆಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು.

Tags:
error: Content is protected !!