ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.
ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್‌ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೇ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.
ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್.1 ಆಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…