ಮಂಡ್ಯ: ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ.
35 ವರ್ಷದ ಲೋಹಿತ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಲೋಹಿತ್ ಖಾಸಗಿ ವ್ಯಕ್ತಿಗಳಿಂದ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದ ಎನ್ನಲಾಗಿದ್ದು, ಸುಮಾರು 30 ಲಕ್ಷ ರೂ ಸಾಲ ಮಾಡಿಕೊಂಡಿದ್ದ ಎಂದು ಅಂದಾಜಿಸಲಾಗಿದೆ.
ಅಲ್ಲದೇ ಮಾಡಿದ್ದ ಸಾಲಕ್ಕೆ ಲಕ್ಷ ಲಕ್ಷ ಬಡ್ಡಿ ಕೂಡ ಕಟ್ಟಿದ್ದ. ಆದರೂ ಮೀಟರ್ ಬಡ್ಡಿ ದಂಧೆಕೋರರ ಹಾವಳಿ ಮಾತ್ರ ತಪ್ಪಿರಲಿಲ್ಲ.
ಯುವಕ ಲೋಹಿತ್ ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.