ಮಂಡ್ಯ

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ: ಸಚಿವರ ತವರಿನಲ್ಲಿಯೂ ಪತ್ತೆಯಾಯ್ತು ದಂಧೆಯ ಜಾಲ

ನಾಗಮಂಗಲ/ಮಂಡ್ಯ: ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ ದಂಧೆ ನಡೆಯುತ್ತಿರುವಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಪ್ರಮುಖ ಆರೋಪಿ ಅಭಿಷೇಕ್‌ ಪರಾರಿಯಾಗಿದ್ದಾನೆ.

ಗುರುವಾರ(ಆ.15)ತಡರಾತ್ರಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್‌ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮನೆಯಲ್ಲಿ ಅಬಾರ್ಷನ್‌ ಕಿಟ್‌, ಸ್ಕ್ಯಾನಿಂಗ್‌ ಮಷಿನ್‌ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ ಹಾಸನ ಮೂಲದ ಗರ್ಭಿಣಿ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತಂದಿದ್ದು, ಈಕೆ ಮೂರನೇ ಹೆಣ್ಣು ಭ್ರೂಣ ಆಬಾರ್ಷನ್‌ಗೆ ಬಂದಿದ್ದರು ಎನ್ನಲಾಗಿದೆ.

ದಾಳಿ ವೇಳೆ ಅಬಾರ್ಷನ್‌ ಕಿಟ್‌ ಹಾಗೂ ಸ್ಕ್ಯಾನಿಂಗ್‌ ಯಂತ್ರವನ್ನು ಸೀಜ್‌ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಪ್ರಮುಖ ಕಿಂಗ್‌ಪಿನ್‌ ಅಭಿಷೇಕ್‌ ಪರಾರಿಯಾಗಿದ್ದಾನೆ. ಇನ್ನು ದಂಧೆ ನಡೆಯುತ್ತಿದ್ದ ಮನೆ ಮಾಲೀಕ ಧನಂಜಯ್‌ ಆರೋಗ್ಯ ಇಲಾಖೆಯ ಗ್ರೂಪ್‌ ಡಿ ಸಿಬ್ಬಂದಿ ಎನ್ನಲಾಗಿದೆ.

ಜಿಲ್ಲೆಯಲ್ಲಿ ನಿಲ್ಲದ ಹೆಣ್ಣು ಭ್ರೂಣ ಪತ್ತೆ……

2023ರ ನವೆಂಬರ್‌ನಲ್ಲಿ ಜಿಲ್ಲೆಯ ಹಾಡ್ಯ-ಹುಳ್ಳೇನಹಳ್ಳಿಯ ಆಲೆಮನೆಯಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಕಾರ್ಯ ಬೆಳಕಿಗೆ ಬಂದಿತ್ತು. ಇಲ್ಲಿ ಪತ್ತೆಯಾದ ಹೆಣ್ಣು ಭ್ರೂಣವನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದು ಗೊತ್ತಾಯಿತು. ಈ ಪ್ರಕರಣದ ಬೆನ್ನು ಹತ್ತಿದ ಬೆಂಗಳೂರು ಪೊಲೀಸರು ಹತ್ತು ಜನರನ್ನು ಬಂಧಿಸಿದ್ದರು. ಈ ಪ್ರಕರಣ ಇಡೀ ರಾಜ್ಯವೇ ಮಂಡ್ಯದತ್ತ ನೋಡುವ ಹಾಗೆ ಮಾಡಿತ್ತು.

ಈ ಪ್ರಕರಣ ಮಾಸುವೆ ಮುನ್ನವೆ ಪಾಂಡವಪುರದ ಆರೋಗ್ಯ ಇಲಾಖೆಯ ಕ್ವಾಟರ್ಸ್‌ನಲ್ಲೇ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದು ಆರೋಪದ ಮೇಳೆ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್‌ ಚಾಲಕ ಸೇರಿದಂತೆ ನಾಲ್ಕ ಮಂದಿಯನ್ನು ಪೊಲೀಸರು ಮೇ ತಿಂಗಳಲ್ಲಿ ಬಂಧಿಸಿದ್ದರು.

ಇದೀಗ ಮತ್ತೆ ಜಿಲ್ಲಾ ಸಚಿವರ ತವರು ಕ್ಷೇತ್ರ ನಾಗಮಂಗಲದಲ್ಲಿಯೇ ದಂಧೆಯ ಜಾಲ ಪತ್ತೆಯಾಗಿದೆ. ಸರ್ಕಾರ ಹಾಗೂ ಪೊಲೀಸ್‌ ಇಲಾಖೆಗಳು ಏಷ್ಟೆಲ್ಲಾ ಕಾನೂನು ಜಾರಿ ಮಾಡಿದರೂ ಈ ದರಿದ್ರ ಕೆಟ್ಟ ಕೆಲಸ ಮಾತ್ರ ನಿಲ್ಲುತ್ತಿಲ್ಲ. ಇದು ಆರೋಗ್ಯ ಇಲಾಖೆಯ ವೈಫಲ್ಯವನ್ನ ಎತ್ತಿ ತೋರಿಸುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

7 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

9 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago