ಮಂಡ್ಯ

ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಕೆ ಮಾಡಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಬದಲಾವಣೆ ಪ್ರಕೃತಿಯ ನಿಯಮ. ಕೃಷಿ ಪದ್ಧತಿ ಎಂದರೆ ಕಷ್ಟವಾದ ಕೆಲಸ, ಸಾಲ ಮಾಡಬೇಕು, ನಷ್ಟ ಅನುಭವಿಸಬೇಕು ಎಂಬ ಮನೋಭಾವವನ್ನು ತೊರೆಯಬೇಕು. ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬಹುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಅವರು ಇಂದು ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ, ಮಂಡ್ಯ ಇಲ್ಲಿ ಕಬ್ಬು, ಭತ್ತ, ರಾಗಿ ಬೆಳೆಗಳ ಬಗ್ಗೆ ವಿಶೇಷ ತಾಂತ್ರಿಕ ಸಂವಾದ (ಬಿತ್ತನೆಯಿಂದ ಮಾರಾಟದವರೆಗೆ)ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿ ಪದ್ದತಿಯಲ್ಲಿ ಹೆಚ್ಚು ಇಳುವರಿ ಹಾಗೂ ಆರ್ಥಿಕವಾಗಿ ಸದೃಢರಾಗಲು ಅನೇಕ ಹೊಸ ಪದ್ಧತಿಗಳನ್ನು ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಮಹಾವಿದ್ಯಾಲಯಗಳು ಪರಿಚಯಿಸುತ್ತಿದೆ. ರೈತರು ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದರು.

ಒಂದೇ ರೀತಿಯ ಬೆಳೆಯನ್ನು ಹಲವು ವರ್ಷಗಳು ನಿರಂತರವಾಗಿ ಬೆಳೆದರೆ ಮಣ್ಣು ಪೌಷ್ಟಿಕಾಂಶ ಕಳೆದುಕೊಳ್ಳುವುದರೆ ಜೊತೆಗೆ ಇಳುವರಿ ಸಹ ಕಡಿಮೆಯಾಗುತ್ತದೆ. ಮೂರು ಎಕರೆ ಜಮೀನನ್ನು ಮೂರು ಭಾಗ ಮಾಡಿ ಒಂದೊಂದು ಎಕರೆಯಲ್ಲಿ ಒಂದೊಂದು ಬೆಳೆಯನ್ನು‌ ಬೆಳೆಯಿರಿ‌. ಮುಂದಿನ ವರ್ಷ ಮೂರು ವಿಭಾಗದಲ್ಲಿ ಬೆಳೆದ ಬೆಳೆಯನ್ನು ಅದಲು ಬದಲು ಮಾಡಿಕೊಳ್ಳಿ ಎಂದರು.

ರೈತರು ಹೊಸ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಲವಾರು‌ ಕಾರಣಗಳಿಂದ ಹಿಂಜರಿಯಬಹುದು‌. ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆಯಿರಿ, ಲಾಭದಾಯಕ ಎಂದು‌ ಮನದಟ್ಟು ಆದ ನಂತರ ಸಂಪೂರ್ಣವಾಗಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago