ಮಂಡ್ಯ

ಅಂಬೇಡ್ಕರ್‌ ಮೌಲ್ಯ ಎಂದಿಗೂ ಜೀವಂತ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ:  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ದೈಹಿಕವಾಗಿ ಪರಿನಿರ್ವಾಣ ಹೊಂದಿ 68 ವರ್ಷ ಕಳೆದರೂ, ಅವರ ಕೊಡುಗೆ,  ಆದರ್ಶ ಚಿಂತನೆ ಹಾಗೂ ಸಾಮಾಜಿಕ ಮೌಲ್ಯಗಳು ಎಂದಿಗೂ ಜೀವಂತವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಂಬೇಡ್ಕರ್‌ ಚಿಂತನೆ, ತತ್ವ ಹಾಗೂ ಆದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ।। ಬಿ.ಆರ್.ಅಂಬೇಡ್ಕರ್ ರವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶ ಕಂಡಂತಹ ಹೊಸ ಶಕ್ತಿ ಹಾಗೂ ಚೇತನವಾಗಿದ್ದು, ದೇಶಕ್ಕೆ ಅತಿ ದೊಡ್ಡ ಸಂವಿಧಾನವನ್ನು ಕೊಟ್ಟಂತ ಮಹಾನಾಯಕ. ಅಂತಹ ಚೈತನ್ಯ ನಮ್ಮ ದೇಶಕ್ಕೆ ದಕ್ಕಿದ್ದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.

ಅಂಬೇಡ್ಕರ್ ಅವರು ಕಂಡಂತಹ ಕನಸಿನ ಅನುಗುಣವಾಗಿ ಸಂವಿಧಾನದ ಆಶಯಗಳಂತೆ ಪಣತೊಟ್ಟು ನಾವೆಲ್ಲರೂ ಬದುಕಬೇಕು.ಅವರ ಚಿಂತನೆಗಳನ್ನು ನಮ್ಮ ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್  ಮಾತನಾಡಿ, ಇಂದು ಬಾಬಾ ಸಾಹೇಬ್ ಡಾ।। ಬಿ.ಆರ್.ಅಂಬೇಡ್ಕರ್ ರವರ 68ನೇ ಪರಿನಿರ್ವಾಣ ದಿನವಾಗಿದೆ. ಅವರು ಬರೆದಿರುವ ಪುಸ್ತಕಗಳು ಪ್ರಸ್ತುತ ದಿನದಲ್ಲಿಯೂ ಜೀವಂತವಾಗಿದೆ. ನಮ್ಮ ದೇಶಕ್ಕೆ ಅವರು ಕೊಟ್ಟಿರುವ ಸಂವಿಧಾನವು ನಮ್ಮ ಬದುಕಿಗೆ ದಾರಿಯಾಗಿದೆ. ಅವರು ಪ್ರತಿಯೊಬ್ಬರಿಗೂ ಸಮಾನತೆ, ಐಕ್ಯತೆ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಸಂವಿಧಾನದ ಮೂಲಕ ನೀಡಿ ಜನರಿಗೆ ಶಕ್ತಿ ತುಂಬಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ,  ಅಂಬೇಡ್ಕರ್‌ ಅವರ ಸಂವಿಧಾನದ ಆಧಾರದ ಮೇಲೆ ಇಂದಿಗೂ ಕಾನೂನು ವ್ಯವಸ್ಥೆ ನಿಂತಿದೆ. ಇವತ್ತಿನ ಕಾಲಮಾನಕ್ಕೂ ಪ್ರಸ್ತುತವಾದ ಸಂವಿಧಾನವನ್ನು ಭಾರತಕ್ಕೆ ನೀಡಿದ ಮಹಾನ್ ಚೇತನರಾಗಿದ್ದು, ಇನ್ನೂ ಸಾವಿರಾರು ವರ್ಷ ಕಳೆದರೂ ಬಾಬ ಸಾಹೇಬ್ ಹೆಸರು ಅಜರಾಮರ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

2 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

2 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

2 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

2 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

2 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

2 hours ago